ವೀರಪಾಂಡ್ಯ ಕಟ್ಟಬೊಮ್ಮನ್ ೧೮ ನೇ ಶತಮಾನದಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಪಾಂಚಾಲಕುರಿಚ್ಚಿ ಎಂಬ ಗ್ರಾಮದ ದಳವಾಯಿ ಹಾಗೂ ಪಾಳೇಗಾರನಾಗಿದ್ದ. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿಸ್ತರಣಾವಾದ, ಆಕ್ರಮಣ ಮತ್ತು ದಬ್ಬಾಳಿಕೆಯ ವಿರುದ್ಧ ತಿರುಗಿಬಿದ್ದವರಲ್ಲಿ ಮೊದಲಿಗನ ಸ್ಥಾನದಲ್ಲಿ ನಿಲ್ಲುವ ಕಟ್ಟಬೊಮ್ಮನ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರ. ಭಾರತದಲ್ಲಿ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ನಡೆಯುವ ಸುಮಾರು ೬೦ ವರ್ಷಗಳಿಗೂ ಮುಂಚೆಯೇ ಬ್ರಿಟೀಷರ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ತಿರುಗಿ ಬಿದ್ದು ಬ್ರಿಟಿಷರಿಗೆ ಸೆರೆಯಾಗಿ ತಮಿಳು ನೆಲದಲ್ಲಿ ಹುತಾತ್ಮನಾದ ಕಟ್ಟಬೊಮ್ಮನ್ ಬಹಳಷ್ಟು ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಪೂರ್ತಿಯ ಸೆಲೆ

ವೀರಪಾಂಡ್ಯ ಕಟ್ಟಬೊಮ್ಮನ್ ಜನವರಿ ೩, ೧೭೬೦ ರಂದು ಜನಿಸಿದ. ಕಟ್ಟಬೊಮ್ಮನ್ ಗೆ ಇಬ್ಬರು ತಮ್ಮಂದಿರಿದ್ದರು, ಮೊದಲನೆಯವನು ದಳವಾಯಿ ಕುಮಾರಸ್ವಾಮಿ ಹಾಗೂ ಎರಡನೆಯವನು ದೊರೆಸಿಂಗಂ. ಫೆಬ್ರವರಿ ೨, ೧೭೯೦ ರಲ್ಲಿ ಪಾಂಚಾಲಕುರಿಚ್ಚಿಯ ಅಧಿಪತ್ಯವಹಿಸಿಕೊಳ್ಳುವ ಕಟ್ಟಬೊಮ್ಮನ್ ಅಂದಿನಿಂದ ಪಾಳೇಗಾರನಾಗುತ್ತಾನೆ.

ಬ್ರಿಟೀಷರ ವಿರುದ್ಧ ಹೋರಾಟ

ಭಾರತ ನೆಲದಲ್ಲಿ ಪರಕೀಯರಿಂದ ನಡೆಯುತ್ತಿದ್ದ ಗುಂಡಿನ ಮೊರೆತಗಳು, ದಾಳಿಗಳು, ಧಾಂದಲೆಗಳು, ದಬ್ಬಾಳಿಕೆಗಳು ಕಟ್ಟಬೊಮ್ಮನ್ ನಿದ್ದೆಗೆಡಿಸಿದ್ದವು. ನಮ್ಮ ನೆಲದಲ್ಲಿ ನಾವು ಸ್ವಾತಂತ್ರ್ಯರಾಗಿರಲು ಬ್ರಿಟೀಷರ ಅಪ್ಪಣೆ ಸಲ್ಲದು ಎಂಬ ನಿಲುವಿಗೆ ಬಂದಿದ್ದ ಕಟ್ಟಬೊಮ್ಮನ್ ಪ್ರಥಮ ಬಾರಿಗೆ ಬಹಿರಂಗವಾಗಿ ಬ್ರಿಟಿಷ್ ಚಕ್ರಾಧಿಪತ್ಯವನ್ನು ವಿರೋಧಿಸಿದ್ದ. ಬ್ರಿಟೀಷರ ಚಕ್ರಾಧಿಪತ್ಯ ಹೇರುವಿಕೆಯನ್ನು ಖಂಡತುಂಡವಾಗಿ ಖಂಡಿಸಿದ ಕಟ್ಟಬೊಮ್ಮನ್ ಏಕತ್ರವಾಗಿ ಬ್ರಿಟೀಷರ ವಿರುದ್ಧ ಸೆಟೆದು ನಿಂತ.

ಮರಣ

೧೭೯೯ ರ ಅಕ್ಟೋಬರ್ ೧ ರಂದು ಸಂಸ್ಥಾನದ ರಾಜ ಕಟ್ಟಬೊಮ್ಮನ್ ಗೆ ದ್ರೋಹವೆಸಗಿ ಬ್ರಿಟಿಷರಿಗೆ ಹಿಡಿದು ಕೊಡಲು ಸಹಕರಿಸಿದನು. ಬ್ರಿಟೀಷರ ವಿರುದ್ಧ ಕುದಿಯುತ್ತಿದ್ದ ಕಟ್ಟಬೊಮ್ಮನ್ ನನ್ನು ಬಂಧಿಸಲಾಯಿತು. ಅದೇ ವರ್ಷದ ಅಕ್ಟೋಬರ್ ೧೬ ರ ವರೆವಿಗೂ ಕಟ್ಟಬೊಮ್ಮನ್ ಅನ್ನು ವಿಚಾರಣೆಗೆ ಒಳಪಡಿಸಿ ನಂತರ ಸಾರ್ವಜನಿಕವಾಗಿ ಗಲ್ಲಿಗೇರುವಂತೆ ಶಿಕ್ಷೆ ನೀಡಲಾಯಿತು. ಅಪ್ರತಿಮ ವೀರ, ತಮಿಳು ನೆಲದಲ್ಲಿ ಸ್ವಾತಂತ್ರ್ಯ ಕಿಡಿ ಹೊತ್ತಿಸಿದ ಕಟ್ಟಬೊಮ್ಮನ್ ನನ್ನು ಅದೇ ದಿನ ಕಾಯಾಥಾರ್ ನಲ್ಲಿ ನೇಣಿಗೇರಿಸಲಾಯಿತು.

ಇಂದಿಗೆ (ಕ್ರಿ.ಶ. 2020) 221 ವರ್ಷಗಳ ಹಿಂದೆ (ಕ್ರಿ.ಶ. 1799-1801) ಭಾರತ ದೇಶದಲ್ಲಿ, ಬ್ರಿಟೀಶರ ಅಧಿಪತ್ಯದ ವಿರುದ್ಧ ನಡೆದ ಮೊದಲ ಯುದ್ಧವನ್ನು ಪಾಂಚಾಲ ಯುದ್ಧ’ ಎಂದು ಕರೆಯಲಾಗುತ್ತದೆ. ಈ ಯುದ್ಧದ ಪ್ರಮುಖ ವೀರ ಕಟ್ಟಬೊಮ್ಮ ಎಂಬ ಅಸಾಮಾನ್ಯ ಶೂರನಾಗಿದ್ದಾನೆ. ಇವನು ಕನ್ನಡ ನಾಡಿನವನೂ, ಹಾಲುಮತ ಕುರುಬನೂ ಎಂಬುದನ್ನು ಬಹು ಹೆಮ್ಮೆಯಿಂದ ಹೇಳುವುದು ಅವಶ್ಯಕವಾಗಿದೆ. ಕಟ್ಟಬೊಮ್ಮನ್ನನ ಪೂರ್ವಜರು ವಿಜಯನಗರ ಕಾಲದಲ್ಲಿ ಬಳ್ಳಾರಿಯ ವಾಡೆಕೋಟೆ’ ಎಂಬ ಹಳ್ಳಿಯಿಂದ ತಮಿಳುನಾಡಿಗೆ ವಲಸೆ ಹೋಗಿ, ಅಲ್ಲಿನ ಪಾಂಡ್ಯ
ಅರಸರ ಸೈನ್ಯಕ್ಕೆ ಸೇರಿದವರು. ಪಾಂಡ್ಯ ಅರಸನು ಸಂತಾನವಿಲ್ಲದೇ ಸಾಯಲು, ಇವರು ಅವನ ಹೆಸರಿನಿಂದಲೇ ಆಡಳಿತ ನಡೆಸಿ ಸ್ವತಂತ್ರ ಸಂಸ್ಥಾನವನ್ನು ಕಟ್ಟುತ್ತಾರೆ. ಬ್ರಿಟೀಶರು
ಈ ಸಂಸ್ಥಾನವನ್ನು ಆಕ್ರಮಿಸಿಕೊಳ್ಳಲು ಪ್ರಯತ್ನಿಸಿದಾಗ ಕಟ್ಟಬೊಮ್ಮನು ಅವರ ವಿರುದ್ಧ ಹೋರಾಡಿ, ಅವರಿಗೆ ಸಿಂಹಸ್ವಪ್ನವಾಗಿದ್ದನು. ಇವನನ್ನು ಬ್ರಿಟೀಶರು ಮೋಸದಿಂದ
ಹಿಡಿದು ಹುಣಸೆ ಮರಕ್ಕೆ ಗÀಲ್ಲಿಗೇರಿಸುತ್ತಾರೆ. ಈ ಮನೆತನದ ಆರಾಧ್ಯ ದೈವ ವೀರ ಜಕ್ಕಮ್ಮ(ಲಕ್ಕಮ್ಮ). ಇವರ ದೈವಾರಾಧನೆ ಕುರಿತಂತೆ ಎಡ್ಗರ್ ಥರ್ಸಟನ್ ಅವರು
ತಮ್ಮ ಕೃತಿ Castes and Tribes of Southern Indiaಯಲ್ಲಿ ಈ ರೀತಿ ದಾಖಲಿಸಿದ್ದಾರೆ.

The Kurubas who are settled in Madhurai district reverence Vira Lakkamma (Lakshmi) as their family deity, and
an interesting feature in connection with the worship of their goddess is that coconuts are broken on the head of a special
Kuruba, who becomes possessed by the deity(Edgar Thurston, Castes and Tribes of Southern India, Vol IV, K-M, p. 151).

 

ಇಂದಿಗೂ ಅಗಲಿದ ಅಪ್ರತಿಮ ಸ್ವಾತಂತ್ರ್ಯ ಸೇನಾನಿಯ ಜ್ಞಾಪಕಾರ್ಥವಾಗಿ ಪಾಂಚಾಲಕುರಿಚ್ಚಿಯಲ್ಲಿ ವೀರಪಾಂಡ್ಯನ್ ಕಟ್ಟಬೊಮ್ಮನ್ ಪರ್ವವನ್ನು ಆಚರಿಸಲಾಗುತ್ತದೆ.
1974 ರಲ್ಲಿ ತಮಿಳುನಾಡು ಸರ್ಕಾರ ಕಾಯಾಥಾರ್ ನಲ್ಲಿನ ಕಟ್ಟಬೊಮ್ಮನ್ ಸಮಾಧಿ ಸ್ಥಳವನ್ನು ಅಭಿವೃದ್ಧಿ ಪಡಿಸಿದೆ.
ಇನ್ನುಳಿದಂತೆ ಪಾಂಚಾಲಕುರಿಚ್ಚಿಯ ಕೋಟೆಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಐತಿಹಾಸಿಕ ಸಂರಕ್ಷಿತ ಸ್ಥಳವೆಂದು ಘೋಷಿಸಿದೆ.
ಜೂನ್ 18, 2015ರಲ್ಲಿ ತಮಿಳುನಾಡಿನ ವೆಲ್ಲಿಂಗ್ಟನ್ನಲ್ಲಿ ಕಟ್ಟಬೊಮ್ಮನ್ ನ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ.
ಕಟ್ಟಬೊಮ್ಮನ್ ಪ್ರಾಣತ್ಯಾಗದ ನೆನಪಿಗಾಗಿ ಭಾರತೀಯ ಅಂಚೆ ಇಲಾಖೆ ಕಟ್ಟಬೊಮ್ಮನ್ ನ ಸ್ಟ್ಯಾಂಪ್ ಗಳನ್ನೂ ಅಕ್ಟೋಬರ್ 16, 1999ರಂದು ಬಿಡುಗಡೆ ಮಾಡಿದೆ.
ವಿಜಯನಾರಾಯಣಂನ ಭಾರತೀಯ ಜಲಸೇನೆಯ ಸಂವಹನ ಕೇಂದ್ರವನ್ನು ಐ ಎನ್ ಎಸ್ ಕಟ್ಟಬೊಮ್ಮನ್ ಎಂದು ಕಟ್ಟಬೊಮ್ಮನ್ ಗೌರವಾರ್ಥ ನಾಮಕರಣ ಮಾಡಲಾಗಿದೆ.
1997 ರ ವರೆವಿಗೂ ತಮಿಳುನಾಡಿನ ತಿರುವನೆಲ್ಲಿ ಸಾರಿಗೆ ವಿಭಾಗವನ್ನು ಕಟ್ಟಬೊಮ್ಮನ್ ಸಾರಿಗೆ ಸಂಸ್ಥೆ ಎಂದೇ ಕರೆಯಲಾಗುತ್ತಿತ್ತು.
ವೀರಪಾಂಡ್ಯನ್ ಕಟ್ಟಬೊಮ್ಮನ್ ಸಾಂಸ್ಕೃತಿಕ ಸಂಘ ವೂ ತಮಿಳುನಾಡಿನಲ್ಲಿ ಅಸ್ತಿತ್ವದಲ್ಲಿದೆ.
1959 ರಲ್ಲಿ ತಮಿಳಿನ ಖ್ಯಾತ ನಟ ಶಿವಾಜಿ ಗಣೇಶನ್ ಕಟ್ಟಬೊಮ್ಮನ್ ಪಾತ್ರದಲ್ಲಿ ನಟಿಸಿದ ಕಟ್ಟಬೊಮ್ಮನ್ ಜೀವನಾಧಾರಿತ ಚಲನಚಿತ್ರವೂ ಬಿಡುಗಡೆಯಾಗಿದೆ.

https://www.youtube.com/watch?v=AXQ9xjq0kJw

Leave a Reply

Your email address will not be published. Required fields are marked *

error: Content is protected !!